﻿ಕೀರ್ತ.
150.
ಯೆಹೋವನಿಗೆ ಸ್ತೋತ್ರ! ದೇವರನ್ನು ಆತನ ಪರಿಶುದ್ಧ ಆಲಯದಲ್ಲಿ ಸ್ತುತಿಸಿರಿ; ಆತನ ಶಕ್ತಿಪ್ರದರ್ಶಕವಾದ ಆಕಾಶಮಂಡಲದಲ್ಲಿ ಆತನನ್ನು ಸ್ತುತಿಸಿರಿ. 
ಆತನ ಮಹತ್ಕಾರ್ಯಗಳಿಗಾಗಿ ಆತನನ್ನು ಸ್ತುತಿಸಿರಿ; ಆತನ ಮಹಾಪ್ರಭಾವಕ್ಕೆ ಸರಿಯಾಗಿ ಆತನನ್ನು ಸ್ತುತಿಸಿರಿ. 
ಕೊಂಬೂದುತ್ತಾ ಆತನನ್ನು ಸ್ತುತಿಸಿರಿ; ಸ್ವರಮಂಡಲ, ಕಿನ್ನರಿಗಳಿಂದ ಆತನನ್ನು ಸ್ತುತಿಸಿರಿ. 
ದಮ್ಮಡಿಯನ್ನು ಬಡಿಯುತ್ತಾ, ಕುಣಿಯುತ್ತಾ ಆತನನ್ನು ಸ್ತುತಿಸಿರಿ; ತಂತಿವಾದ್ಯಗಳಿಂದಲೂ, ಕೊಳಲುಗಳಿಂದಲೂ ಆತನನ್ನು ಸ್ತುತಿಸಿರಿ. 
ತಾಳದಿಂದ ಆತನನ್ನು ಸ್ತುತಿಸಿರಿ; ಝಲ್ಲರಿಯಿಂದ ಆತನನ್ನು ಸ್ತುತಿಸಿರಿ. 
ಶ್ವಾಸವಿರುವ ಎಲ್ಲವೂ ಯೆಹೋವನನ್ನು ಸ್ತುತಿಸಲಿ; ಯೆಹೋವನಿಗೆ ಸ್ತೋತ್ರ!
