﻿ಯೋಬ.
25.
ಶೂಹ್ಯನಾದ ಬಿಲ್ದದನು ಉತ್ತರಕೊಟ್ಟು ಹೇಳಿದ್ದೇನೆಂದರೆ: 
“ಅಧಿಕಾರ ಮತ್ತು ವಿಸ್ಮಯ ದೇವರಿಗೆ ಸೇರಿದೆ; ಉನ್ನತಲೋಕದಲ್ಲಿ ಸಮಾಧಾನವನ್ನು ಸ್ಥಾಪಿಸಿದವರು ದೇವರೇ. 
ದೇವರ ಸೈನ್ಯಗಳಿಗೆ ಲೆಕ್ಕ ಉಂಟೋ? ಯಾರ ಮೇಲೆ ದೇವರ ಬೆಳಕು ಮೂಡುವುದಿಲ್ಲ? 
ಮನುಷ್ಯನು ದೇವರ ಮುಂದೆ ನೀತಿವಂತನಾಗುವುದು ಹೇಗೆ? ಸ್ತ್ರೀಯಿಂದ ಹುಟ್ಟಿದವನು ಪರಿಶುದ್ಧನಾಗಿರುವುದು ಹೇಗೆ? 
ಇಗೋ, ಚಂದ್ರನೂ ಪ್ರಕಾಶಮಾನವಾಗಿರುವದಿಲ್ಲ; ನಕ್ಷತ್ರಗಳಾದರೂ ದೇವರ ದೃಷ್ಟಿಗೆ ಶುದ್ಧವಾದವುಗಳಲ್ಲ. 
ಹೀಗಿರುವಲ್ಲಿ ಹುಳುವಿನಂಥ ಮನುಷ್ಯನು ದೇವರ ದೃಷ್ಟಿಯಲ್ಲಿ ಎಷ್ಟೋ ಕಡಿಮೆ! ಕ್ರಿಮಿಯಂಥ ಮನವರು ಎಷ್ಟೋ ಅಲ್ಪರು!” 
