﻿ಕೀರ್ತನೆಗಳು.
100.
ಕೀರ್ತನೆ. ಕೃತಜ್ಞತೆಯ ಗೀತೆ. ಸಮಸ್ತ ಭೂಮಿಯೇ, ಯೆಹೋವ ದೇವರಿಗೆ ಜಯಧ್ವನಿ ಮಾಡಿರಿ. 
ಸಂತೋಷದಿಂದ ಯೆಹೋವ ದೇವರನ್ನು ಆರಾಧಿಸಿರಿ; ಆನಂದದಿಂದ ಹಾಡುತ್ತಾ ಅವರ ಮುಂದೆ ಬನ್ನಿರಿ. 
ಯೆಹೋವ ದೇವರೇ ದೇವರೆಂದು ತಿಳುಕೊಳ್ಳಿರಿ; ಅವರೇ ನಮ್ಮನ್ನು ಉಂಟುಮಾಡಿದ್ದಾರೆ; ನಾವು ಅವರ ಜನರೂ, ಅವರು ಮೇಯಿಸುವ ಕುರಿ ಮಂದೆಯೂ ಆಗಿದ್ದೇವೆ. 
ಕೃತಜ್ಞತೆಯಿಂದ ಅವರ ಬಾಗಿಲುಗಳಿಗೂ, ಕೃತಜ್ಞತಾ ಸ್ತೋತ್ರದಿಂದ ಅವರ ಅಂಗಳಗಳಿಗೂ ಬನ್ನಿರಿ; ಅವರನ್ನು ಕೊಂಡಾಡಿರಿ, ಅವರ ಹೆಸರನ್ನು ಸ್ತುತಿಸಿರಿ. 
ಯೆಹೋವ ದೇವರು ಒಳ್ಳೆಯವರು, ಅವರ ಕರುಣೆಯು ಯುಗಯುಗಕ್ಕೂ ಇರುವುದು. ಅವರ ಸತ್ಯತೆಯು ತಲತಲಾಂತರಕ್ಕೂ ಮುಂದುವರಿಯುವುದು. 
