﻿ಕೀರ್ತನೆಗಳು.
136.
ಯೆಹೋವ ದೇವರಿಗೆ ಉಪಕಾರ ಸಲ್ಲಿಸಿರಿ; ಅವರು ಒಳ್ಳೆಯವರು; 
ದೇವಾಧಿ ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸಿರಿ; 
ಪ್ರಭುಗಳ ಪ್ರಭುವಿಗೆ ಕೃತಜ್ಞತಾಸ್ತುತಿ ಸಲ್ಲಿಸಿರಿ; 
ಅವರೊಬ್ಬರೇ ಮಹಾ ಅದ್ಭುತಗಳನ್ನು ಮಾಡುತ್ತಾರೆ; 
ತಮ್ಮ ಜ್ಞಾನದಿಂದ ಪರಲೋಕಗಳನ್ನು ನಿರ್ಮಿಸಿದರು; 
ನೀರಿನ ಮೇಲೆ ಭೂಮಿಯನ್ನು ವಿಸ್ತರಿಸಿದರು; 
ದೊಡ್ಡ ಬೆಳಕುಗಳನ್ನು ನಿರ್ಮಿಸಿದರು; 
ಸೂರ್ಯನು ಹಗಲನ್ನಾಳುವಂತೆ ಮಾಡಿದರು; 
ರಾತ್ರಿಯನ್ನಾಳಲು ಚಂದ್ರನನ್ನೂ, ನಕ್ಷತ್ರಗಳನ್ನೂ ಇಟ್ಟರು; 
ಈಜಿಪ್ಟಿನವರ ಚೊಚ್ಚಲ ಮಕ್ಕಳನ್ನು ದಂಡಿಸಿದರು; 
ಇಸ್ರಾಯೇಲರನ್ನು ಈಜಪ್ಟಿನಿಂದ ಹೊರಗೆ ಬರಮಾಡಿದವರನ್ನು ಕೊಂಡಾಡಿರಿ; 
ಬಲವಾದ ಕೈಯಿಂದಲೂ, ಚಾಚಿದ ತೋಳಿನಿಂದಲೂ ಅವರನ್ನು ಹೊರತಂದರು; 
ಕೆಂಪು ಸಮುದ್ರವನ್ನು ವಿಭಾಗಿಸಿದರು; 
ಇಸ್ರಾಯೇಲನ್ನು ಅದರ ನಡುವೆ ದಾಟಿಸಿದರು; 
ಫರೋಹನನ್ನೂ, ಅವನ ಸೈನ್ಯವನ್ನೂ ಕೆಂಪು ಸಮುದ್ರದಲ್ಲಿ ಕೆಡವಿದರು; 
ತಮ್ಮ ಜನರನ್ನು ಮರುಭೂಮಿಯಲ್ಲಿ ನಡೆಸಿದರು; 
ದೊಡ್ಡ ಅರಸರನ್ನು ದಂಡಿಸಿದರು; 
ಶ್ರೇಷ್ಠ ಅರಸರನ್ನು ಸಹ ದಂಡಿಸಿದರು; 
ಅಮೋರಿಯರ ಅರಸನಾದ ಸೀಹೋನನು ದಂಡನೆಹೊಂದಿದನು; 
ಬಾಷಾನಿನ ಅರಸನಾದ ಓಗನು ಸಂಹಾರವಾದ ಮತ್ತೊಬ್ಬನು; 
ಅವರ ದೇಶವನ್ನು ಬಾಧ್ಯತೆಯಾಗಿ ದೇವರು ಕೊಟ್ಟರು; 
ತಮ್ಮ ಸೇವಕ ಇಸ್ರಾಯೇಲನಿಗೆ ಅದು ಸೊತ್ತಾಯಿತು; 
ನಾವು ಹೀನ ಸ್ಥಿತಿಯಲ್ಲಿದ್ದಾಗ ನಮ್ಮನ್ನು ನೆನಪಿಸಿಕೊಂಡರು; 
ನಮ್ಮ ವೈರಿಗಳಿಂದ ನಮ್ಮನ್ನು ಬಿಡಿಸಿದರು; 
ಸಕಲ ಜೀವಿಗಳಿಗೂ ಆಹಾರವನ್ನು ಕೊಡುತ್ತಾರೆ; 
ಪರಲೋಕದ ದೇವರನ್ನು ಕೊಂಡಾಡಿರಿ; 
